ಭಾರತ, ಫೆಬ್ರವರಿ 17 -- ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ನೀಡಿದ್ದ ಚುನಾವಣಾ ಭರವಸೆಗಳಾದ 5 ಗ್ಯಾರೆಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೊಳಿಸಿದೆ. ಈ ಪೈಕಿ ಮಹಿಳೆಯರಿಗೆ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಮುಖ್ಯವಾದುದು. ಇನ್ನೊಂದು ಅನ್ನಭಾಗ್ಯದ ಯೋಜನೆ. ಈ ಎರಡೂ ಯೋಜನೆಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ ಎಂಬುದು ಸದ್ಯದ ಆರೋಪ. ಗ್ಯಾರೆಂಟಿ ಯೋಜನೆಗಳು ಜಾರಿಗೆ ಮೊದಲೇ ಸಾಕಷ್ಟು ಟೀಕೆಗೆ ಗುರಿಯಾಗಿದ್ದು, ಇದರ ಅನುಷ್ಠಾನ ಕಷ್ಟ ಎಂಬ ಮಾತು ಆರಂಭದಲ್ಲೇ ಕೇಳಿತ್ತು. ಆದರೂ ಕಾಂಗ್ರೆಸ್ ಸರ್ಕಾರ ಇದನ್ನೇ ಮಾದರಿಯನ್ನಾಗಿ ಮಾಡಿ ಕರ್ನಾಟಕ ಮಾದರಿ ರೂಪಿಸಲು ಹೊರಟಿತ್ತು. ಬಿಜೆಪಿ ನಾಯಕರು ಇದನ್ನು ಟೀಕಿಸುತ್ತಲೇ ಇದ್ದು, ಈಗ ಫಲಾನುಭವಿಗಳಿಗೆ ಹಣ ಜಮೆ ಮಾಡುವುದು ವಿಳಂಬ ಮಾಡಿರುವುದು ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.

ಗದಗ, ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ವಿವಿಧೆಡೆಯ ಮಹಿಳೆಯರು ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಕೆಲವ...