ಭಾರತ, ಮೇ 20 -- ಬೆಂಗಳೂರು/ ವಿಜಯನಗರ: ಕಾಂಗ್ರೆಸ್ ಸರ್ಕಾರಕ್ಕೆ ಇಂದು 2 ವರ್ಷ ತುಂಬಿದ ಕಾರಣ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಆಯೋಜಿಸಿದ್ದ ಸರ್ಕಾರ, ಅದಕ್ಕೂ ಮೊದಲೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಆಘಾತ ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗಾರರ ಜತೆಗೆ ಮಾತನಾಡುತ್ತ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳಾ ಕೊಡ್ತೇವೆ ಅಂತ ಹೇಳಿಲ್ಲ ಎಂದು ಸ್ಪಷ್ಟವಾಗಿ ನಿನ್ನೆ (ಮೇ 19) ಹೇಳಿದರು. ಆದಾಗ್ಯೂ ಇಂದು ತಮ್ಮ ವರಸೆ ಬದಲಾಯಿಸಿದ್ದು, ಹಾಗಲ್ಲ ಹೇಳಿದ್ದು ಎಂದು ಹೇಳಿಕೆಗೆ ತೇಪೆ ಹಚ್ಚಲು ಪ್ರಯತ್ನಿಸಿದ್ದಾರೆ.
ವಿಜಯನಗರಕ್ಕೆ ಬಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಾಧನಾ ಸಮಾವೇಶದ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡುತ್ತಿದ್ದರು. ಆಗ ಅಲ್ಲಿದ್ದ ಸುದ್ದಿಗಾರರು, ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಳಂಬ ಆಗುತ್ತಿರುವ ಬಗ್ಗೆ ಗಮನಸೆಳೆದರು. ಇದಕ್ಕೆ ಉತ್ತರಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, "ನೋಡ್ರೀ, ನಾವು ತಿಂಗಳ ತಿಂಗಳಾ ಹಣ ಕೊಡ್ತೇವೆ ಅಂತ ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.