ಭಾರತ, ಮೇ 21 -- ಬೆಂಗಳೂರು: ಕರ್ನಾಟಕದ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಡಾ.ಜಿ.ಪರಮೇಶ್ವರ್‌ ಅವರಿಗೆ ಸೇರಿದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ ಬುಧವಾರ ಬೆಳಿಗ್ಗೆ ದಾಳಿ ಮಾಡಿದೆ. ತುಮಕೂರು ನಗರ, ಹೊರ ವಲಯದಲ್ಲಿರುವ ಸಿದ್ದಾರ್ಥ ಸಂಸ್ಥೆಗೆ ಸೇರಿದ ಶಿಕ್ಷಣ ಸಂಸ್ಥೆಗಳು, ನೆಲಮಂಗಲದಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕೆಲವು ಕಚೇರಿಗಳಿಗೆ ಇಡಿ ತಂಡಗಳು ದಾಳಿ ಮಾಡಿವೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೂರುಗಳು ಬಂದಿದ್ದರಿಂದ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿರುವ ಹಣಕಾಸಿನ ವಹಿವಟಿಗೆ ಸಂಬಂಧಿಸಿ ಸಂಸ್ಥೆಯ ಪ್ರಮುಖರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Published by HT Digital Content Services with permission from HT Kannada....