ಭಾರತ, ಮೇ 20 -- ರಾಜಸ್ಥಾನ್‌ ರಾಯಲ್ಸ್ ತಂಡವು ಗೆಲುವಿನೊಂದಿಗೆ ಐಪಿಎಲ್‌ 2025ರಲ್ಲಿ (IPL 2025) ತನ್ನ ಅಭಿಯಾನ ಮುಗಿಸಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡವು (Chennai Super Kings vs Rajasthan Royals) ತನ್ನ ಸೋಲಿನ ಸರಪಳಿಯನ್ನು ಮುಂದುವರೆಸಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಆರ್‌ ತಂಡವು 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ರಾಜಸ್ಥಾನ, ಲೀಗ್‌ ಹಂತದಲ್ಲಿ ತನ್ನ ಕೊನೆಯ ಪಂದ್ಯ ಆಡಿತು. ಒಟ್ಟು 14 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ 8 ಅಂಕ ಸಂಪಾದಿಸಿದ ತಂಡವು ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಸಿಎಸ್‌ಕೆ 8 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡವು 17.1 ಓವರ್‌ಗಳಲ್ಲಿ ಗುರಿ ತಲುಪಿತು. ಸಿಎಸ್‌ಕೆ ತಂಡವು ಪ್ರಸಕ್ತ ಆವೃತ್ತಿಯಲ್ಲಿ 10ನೇ ಸೋಲು ಕಂಡಿದೆ. ಕೇವಲ 3 ಪಂದ್ಯಗಳಲ್ಲಿ...