ಭಾರತ, ಮಾರ್ಚ್ 8 -- ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ದಾಖಲಿಸಿದ 226 ರನ್​ಗಳ ಬೃಹತ್ ಮೊತ್ತವನ್ನು ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಪಂದ್ಯ ಬಾಕಿ ಇರುವಂತೆಯೇ ಡಬ್ಲ್ಯುಪಿಎಲ್​ ಟೂರ್ನಿಯಿಂದ ಹೊರಬಿದ್ದಿದೆ. ರಿಚಾ ಘೋಷ್ (69) ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೋರಾಡುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಯುಪಿ ವಿರುದ್ಧ ಆರ್​ಸಿಬಿ ಸೋಲುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಅಧಿಕೃತವಾಗಿ ಪ್ಲೇಆಫ್​​ಗೆ ಪ್ರವೇಶಿಸಿದವು. ಶತಕ ವಂಚಿತರಾದ ಜಾರ್ಜಿಯಾ ವೋಲ್ (99) ಅವರ ಸ್ಫೋಟಕ ಆಟದ ನೆರವಿನಿಂದ ಯುಪಿ ತನ್ನ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತು. ಇದು ಡಬ್ಲ್ಯುಪಿಎಲ್ ಇತಿಹಾಸದಲ್ಲಿ ತಂಡವೊಂದು ದಾಖಲಿಸಿದ ಬೃಹತ್ ಮೊತ್ತ. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 19.3 ಓವರ್​ಗಳಲ್ಲಿ 213ಕ್ಕೆ ಆಲೌಟ್ ಆಯಿತು.

Published by HT Digital Content Servic...