ಭಾರತ, ಮೇ 23 -- ಬೆಂಗಳೂರು: ಕರ್ನಾಟಕ ಸರ್ಕಾರವು 2025-26ರ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. 2025ರ ಮೇ 29ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ.
2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ. ಹೊಸ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಆದೇಶಿಸಲಾಗಿದೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.