ಭಾರತ, ಏಪ್ರಿಲ್ 18 -- ಕಾರವಾರ: ಸ್ವಯಂಸೇವಾ ಸಂಸ್ಥೆಗಳು ಬೇಸಿಗೆ ಶಿಬಿರ ಏರ್ಪಡಿಸುವುದು ಮಾಮೂಲು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರವೇ ಬೇಸಿಗೆ ಶಿಬಿರ ಏರ್ಪಡಿಸಿ ಗಮನಸೆಳೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲಾಗಿದ್ದು, ಹದಿನೈದು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಓದುವ, ಬರೆಯುವ, ಅ...