Bengaluru, ಜನವರಿ 27 -- Raghavendra chitravani Awards 2025: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಹತ್ತಾರು ಗಣ್ಯರ ಸಮ್ಮುಖದಲ್ಲಿ ಸಾಧಕರಿಗೆ ಪ್ರಶಸ್ತಿ ವಿತರಣೆ ಮಾಡಲಾಯ್ತು.

"ಸೊಸೆ ತಂದ ಸೌಭಾಗ್ಯ" ಸಿನಿಮಾದಿಂದ ಪಿಆರ್‌ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ, ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮಾತು ಆರಂಭಿಸಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಸಿನಿಮಾ ಪಿಆರ್‌ಒಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗ...