ಭಾರತ, ಫೆಬ್ರವರಿ 28 -- ಶುಕ್ರವಾರ (ಫೆ.28) ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಯಿತು. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಳೆಯಿಂದ ರದ್ದಾದ 3ನೇ ಪಂದ್ಯ ಇದು. ರದ್ದಾದರೂ 'ಬಿ' ಗುಂಪಿನಿಂದ ಆಸ್ಟ್ರೇಲಿಯಾ ಕ್ರಿಕೆಟ್​ ತಂಡವು ಮೊದಲ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಒಟ್ಟು ನಾಲ್ಕು ಅಂಕ ಪಡೆಯಿತು. ಮತ್ತೊಂದೆಡೆ ಅಫ್ಘಾನಿಸ್ತಾನಕ್ಕೆ ಇನ್ನೂ ಸೆಮಿಫೈನಲ್ ಕನಸು ಜೀವಂತವಾಗಿದೆ. ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಆಫ್ರಿಕನ್ನರು ಭಾರೀ ಅಂತರದಿಂದ ಸೋತರೆ ಮಾತ್ರ ಅಫ್ಘನ್​ಗೆ ನಾಲ್ಕರ ಘಟ್ಟಕ್ಕೆ ಪ್ರವೇಶಿಸಲು ಸಾಧ್ಯವಾಗುತ್ತದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳಿಗೆ 273 ರನ್ ಗಳಿಸಿತು. ತಂಡಕ್ಕೆ ಸೆಡಿಕುಲ್ಲಾ ಅಟಲ್ (85) ಮತ್ತು ಅಜ್ಮತುಲ್ಲಾ ಒಮರ್ಜಾಯ್ (67) ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 274 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆ...