ಭಾರತ, ಫೆಬ್ರವರಿ 28 -- ಚಾಂಪಿಯನ್ಸ್ ಟ್ರೋಫಿಯಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದ ಹಿನ್ನೆಲೆ ಲಾಹೋರ್​​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮಾರ್ಚ್ 1) ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ತಮ್ಮ ಕೊನೆಯ ಪಂದ್ಯಕ್ಕೂ ಮುನ್ನ ಜೋಸ್ ಬಟ್ಲರ್ ಇಂಗ್ಲೆಂಡ್‌ ತಂಡದ ವೈಟ್-ಬಾಲ್ ಕ್ರಿಕೆಟ್ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ದೃಢಪಡಿಸಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಟ್ಲರ್ ಕೊನೆಯ ಬಾರಿಗೆ ಇಂಗ್ಲೆಂಡ್ ಅನ್ನು ಮುನ್ನಡೆಸಲಿದ್ದಾರೆ. ಸೋಲಿನ ಹೊಣೆ ಹೊತ್ತು ಈ ನಿರ್ಧಾರ ಕೈಗೊಂಡಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಲಾಹೋರ್‌ನಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ನಡೆದ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಸೋತ ನಂತರ ಮತ್ತು ಎರಡು ಬಾರಿ ಫೈನಲಿಸ್ಟ್ ಆಗಿದ್ದ ತಂಡ ಗುಂಪು ಹಂತದಲ್ಲಿಯೇ ಹೊರಬಿದ್ದ ನಂತರ ಈ ಘೋಷಣೆ ಬಂದಿದೆ. ಬುಧವಾರ (ಫೆಬ್ರವರಿ 26) ಅಫ್ಘಾನಿಸ್ತಾನ ವಿರುದ್ಧದ ಸೋಲಿನ ನಂತರ, ಬಟ್ಲರ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಉನ್ನತ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ಯೋಚಿಸುತ್ತ...