Bangalore, ಏಪ್ರಿಲ್ 22 -- ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯು ಇಂದು ನಡೆದಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲ ಮತ್ತು ಆರ್. ಮಹದೇವನ್ ಅವರ ದ್ವಿಸದಸ್ಯ ಪೀಠ ಇಂದು ವಕೀಲರಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದೆ. ಕರ್ನಾಟಕ ಕೋರ್ಟ್‌ ಜಾಮೀನು ನೀಡಿರುವ ಔಚಿತ್ಯದ ಕುರಿತು ಇನ್ನಷ್ಟು ವಿಚಾರಣೆಯ ಅಗತ್ಯವಿದೆಯೆಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹೌದು, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ನಿರಾಳವಾಗುವ ಸುದ್ದಿ ಬಂದಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಸಿದ ಕೋರ್ಟ್‌ ಇನ್ನಷ್ಟು ವಿಚಾರಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಲಾಗಿದೆ. ಮುಂದಿನ 21 ದಿನಗಳ ಕಾಲ ದರ್ಶನ್‌ಗೆ ನಿರಾಳವಾಗಿದೆ. ಈ ಹಿಂದೆಯೂ ಇದೇ ರೀತಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತ್ತು. ಇದೇ ತಿಂಗಳ ಆರಂಭದಲ್ಲಿ ...