ಭಾರತ, ಮಾರ್ಚ್ 17 -- ಬೆಂಗಳೂರು: ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡು ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ಕರ್ನಾಟಕದಲ್ಲಿ ಹೆಚ್ಚಾಗುತ್ತಿವೆ. ಈ ರೀತಿ ತೊಂದರೆಗೆ ಒಳಗಾದ ಪಾಲಕರು ತಮ್ಮ ಮಕ್ಕಳ ಪರವಾಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವುದಕ್ಕೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವೃದ್ಧ ಪಾಲಕರಿಗೆ ನೆರವಾಗುವಂತೆ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕಿತ್ಸೆ ನೆಪದಲ್ಲಿ ವೃದ್ಧ ಪಾಲಕರನ್ನು ಆಸ್ಪತ್ರೆಯಲ್ಲೇ ಬಿಟ್ಟು ಮಕ್ಕಳು ನಾಪತ್ತೆಯಾದ ಪ್ರಕರಣ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲೇ 150ಕ್ಕೂ ಇವೆ. ಇತರೆ ವೈದ್ಯಕೀಯ ಸಂಸ್ಥೆಗಳಲ್ಲೂ ಇಂತಹ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಜನ್ಮ ನೀಡಿದ ತಂದೆ-ತಾಯಂದಿರನ...