ಭಾರತ, ಮಾರ್ಚ್ 1 -- ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿದೆ. ಚಿಕ್ಕಮಗಳೂರಿನ ಲಕ್ಯಾ ಕ್ರಾಸ್ ಬಳಿ ವಿಜಯೇಂದ್ರ ಅವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಆದರೆ, ಅದೃಷ್ಟವಷಾತ್‌ ಅಪಘಾತದ ಸಮಯದಲ್ಲಿ ವಿಜಯೇಂದ್ರ ಅವರು ಕಾರಿನಲ್ಲಿ ಇರಲಿಲ್ಲ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ದಿನ ನಿತ್ಯ ಪ್ರಯಾಣಿಸುವ ಕಾರು ಬಿಟ್ಟು ಅವರು ಬೇರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ವೇಳೆ ವಿಜಯೇಂದ್ರ ಕಾರು ಚಲಾಯಿಸುತ್ತಿದ್ದ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಫೆ. 28ರ ಶುಕ್ರವಾರದಂದು ಬಸವ ತತ್ವ ಕಾರ್ಯಕ್ರಮ ಮುಗಿಸಿ ವಿಜಯೇಂದ್ರ ಅವ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಸಾಮಾನ್ಯವಾಗಿ ಹೊರ‌ ಜಿಲ್ಲೆಗಳಿ...