ಭಾರತ, ಮಾರ್ಚ್ 18 -- ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತು ಇತರರಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಏಪ್ರಿಲ್ 2 ರಂದು ನಡೆಯಲಿದೆ. ಇಂದು ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ಸಿ. ನಿಶಾನಿ ಮಾಡಿದ ತುರ್ತು ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್‌ ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಮತ್ತು ಆರ್. ಮಹಾದೇವನ್ ಅವರ ಪೀಠ ಈ ದಿನಾಂಕವನ್ನು ನಿಗದಿಪಡಿಸಿದೆ.

ಒಂದು ವೇಳೆ ದರ್ಶನ್‌, ಪವಿತ್ರಾಗೌಡ ಮೊದಲಾದ ಆರೋಪಿಗಳ ಜಾಮೀನು ರದ್ದುಗೊಂಡರೆ ಮತ್ತೆ ಎಲ್ಲ 17 ಆರೋಪಿಗಳು ಜೈಲು ಸೇರಬೇಕಾಗುತ್ತದೆ. ಜನವರಿ 24 ರಂದು, ಸುಪ್ರೀಂಕೋರ್ಟ್‌, ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಆದರೆ ಅದರ ಸಿಂಧುತ್ವವನ್ನು ಪ್ರಶ್ನಿಸಿದ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿತ್ತು. ನಂತರ ಹೈಕೋರ್ಟ್‌ನ ಜಾಮೀನು ಆದೇಶದ ವ...