ಭಾರತ, ಮಾರ್ಚ್ 10 -- ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಈ ಪ್ರಶಸ್ತಿ 10 ಲಕ್ಷದ ಚೆಕ್ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

"ಮಿಲೇಸುರ್ ಮೇರಾ ತುಮಾರಾ" ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು. ಬಳಿಕ ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು. ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ...