ಭಾರತ, ಮಾರ್ಚ್ 27 -- ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನದ ಅಕ್ರಮ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಮೂಲದ ಉದ್ಯಮಿಯೊಬ್ಬರನ್ನು ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ತನ್ನ ವಶಕ್ಕೆ ತೆಗೆದುಕೊಂಡಿದೆ. ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡಲು ರನ್ಯಾ ರಾವ್‌ಗೆ ಸಹಾಯ ಮಾಡಿದ ಆರೋಪ ಹೊತ್ತಿರುವ ಸಾಹಿಲ್ ಜೈನ್ ಮಾರ್ಚ್ 29ರವರೆಗೆ ಡಿಆರ್‌ಐ ವಶದಲ್ಲಿ ಇರಲಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮೂಲದ ವ್ಯಾಪಾರಿಯನ್ನು ವಿಚಾರಣೆ ನಡೆಸಲಾಗಿದೆ. ಬಳಿಕ ಕಂದಾಯ ಗುಪ್ತಚರ ನಿರ್ದೇಶನಾಲಯ ಬುಧವಾರ ಆತನನ್ನು ಬಂಧಿಸಿದೆ. ಕಳ್ಳಸಾಗಣೆ ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಮತ್ತು ಮಾರಾಟದ ಆದಾಯವನ್ನು ಹಂಚಿಕೊಳ್ಳಲು ಸಾಹಿಲ್ ಜೈನ್ ನಟಿ ರನ್ಯಾ ರಾವ್ ಅವರಿಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 64ನೇ ಸಿಸಿಎಚ್ ಸೆಷನ್ಸ್ ನ್ಯಾಯಾಲಯದಲ್ಲಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆ ...