ಭಾರತ, ಮಾರ್ಚ್ 11 -- ಬೆಂಗಳೂರು: ಚಿನ್ನ ಕಳ್ಳಸಾಗಣೆ ಮಾಡುವುದಕ್ಕಾಗಿ ರನ್ಯಾ ರಾವ್ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪವಿದೆ. ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಶಿಷ್ಟಾಚಾರದ ದುರ್ಬಳಕೆಯಾಗಿದೆ ಎಂಬ ಕಾರಣಕ್ಕೆ ಇದೀಗ ಅವರ ಪಾತ್ರವೇನು ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರ ತನಿಖಾಧಿಕಾರಿಯನ್ನು ನೇಮಕ ಮಾಡಿದೆ. ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ ಈ ಶಿಷ್ಟಾಚಾರ ಉಲ್ಲಂಘನೆ ಪ್ರಕರಣದ ತನಿಖೆ ನಡೆಸಲಿದ್ದಾರೆ.

ಸರ್ಕಾರದ ನಡಾವಳಿ ಟಿಪ್ಪಣಿ ಪ್ರಕಾರ, ಕಳೆದ ಒಂದು ವಾರದಿಂದ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಚಿತ್ರನಟಿ ರನ್ಯಾ ರಾವ್ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ರನ್ಯಾ ರಾವ್ ಇವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾಗಿರುತ್ತದೆ.

ಅಲ್ಲದೇ, ವ...