ಭಾರತ, ಮಾರ್ಚ್ 20 -- Gold Smuggling Case: ನಟಿ ರನ್ಯಾ ರಾವ್ (ಹರ್ಷವರ್ಧಿನಿ) ಜತೆಗೆ ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿ ಬಂಧಿತರಾಗಿರುವ ತರುಣ್ ರಾಜು ಅಲಿಯಾಸ್ ತೆಲುಗು ನಟ ವಿರಾಟ್ ಕೊಂಡೂರು ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆ ಅರ್ಜಿಯನ್ನು ವಜಾಗೊಳಿಸಿದೆ.

ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ ಚನ್ನಬಸಪ್ಪ ಗೌಡರ್‌ ಅವರು ಬುಧವಾರ ಜಾಮೀನು ನಿರಾಕರಿಸಿ, ತರುಣ್ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದರು. ರೆವಿನ್ಯೂ ಗುಪ್ತಚರ ಅಧಿಕಾರಿಗಳು (ಡಿಆರ್‌ಐ) ಮಾರ್ಚ್‌ 9ರಂದು ತರುಣ್ ಅವರನ್ನು ಬಂಧಿಸಿ, ಐದು ದಿನ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇದರಂತೆ, ತರುಣ್ ರಾಜು ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಆರೋಪಿ ತರುಣ್‌ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಡಿಆರ್‌ಐ ಪರ ಎಸ್‌ಪಿಪಿ (ವಿಶೇ...