Bengaluru, ಮಾರ್ಚ್ 18 -- Gold Smuggling Case: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್‌ ಅವರನ್ನು ಗೌರವ ಗುಪ್ತ ನೇತೃತ್ವದ ತನಿಖಾ ತಂಡ ಸೋಮವಾರ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.

ವಿಚಾರಣೆಗೆ ಹಾಜರಾಗುವಂತೆ ರಾಮಚಂದ್ರ ರಾವ್‌ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಸೋಮವಾರ ಸಂಜೆ 5 ಗಂಟೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದ ಪೊಲೀಸರು ಮತ್ತು ಸಿಬ್ಬಂದಿ ನೀಡಿರುವ ಹೇಳಿಕೆಗಳನ್ನು ಕುರಿತೂ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾಗಿದ್ದ ರಾಮಚಂದ್ರ ರಾವ್ ಅವರನ್ನು ಮಾರ್ಚ್ 15ರಂದು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಈ ಮಧ್ಯೆ ರನ್ಯಾ ರಾವ್‌ ಅವರ ...