ಭಾರತ, ಮಾರ್ಚ್ 15 -- ಬೆಂಗಳೂರು: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಅವರಿಗೆ ಬೆಂಗಳೂರು ವಿಶೇಷ ಆರ್ಥಿಕ ಅಪರಾಧ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ. ರನ್ಯಾ ಪರ ವಕೀಲರು ಮತ್ತು ಡಿಆರ್‌ಐ ವಕೀಲರ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ವಿಶ್ವನಾಥ್ ಚನ್ನಬಸಪ್ಪ ಗೌಡರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಹಾಗಾಗಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರನ್ಯಾ ವಾಸ ಮುಂದುವರಿಯಲಿದೆ.

ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿರೋಧಿಸಿದ ಡಿಆರ್‌ಐ ಅಧಿಕಾರಿಗಳು, ಚಿನ್ನ ಕಳ್ಳಸಾಗಣೆಯು ರಾಷ್ಟ್ರೀಯ ಭದ್ರತೆಯ ವಿಷಯಕ್ಕೆ ಸಂಬಂಧಿಸಿದ್ದು. ಈ ಪ್ರಕರಣದ ತನಿಖೆಗೆ ರನ್ಯಾ ರಾವ್ ಸಹಕರಿಸುತ್ತಿಲ್ಲ. ಹೀಗಾಗಿ ರನ್ಯಾ ರಾವ್ ಅವರಿಗೆ ಜಾಮೀನು ನೀಡಬಾರದು ಎಂದು ಡಿಆರ್‌ಐ ಪರ ವಕೀಲರು ವಾದ ಮಂಡಿಸಿದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು, ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇನ್ನೊಂದೆಡೆ, ಪ್ರಕರಣದ ಎರಡನೇ ಆರೋಪಿ ತರುಣ್‌ ರಾಜುಗೆ 14 ದಿನ ನ್ಯಾಯಾಂಗ ಬಂಧನ ವಿ...