Bengaluru, ಮೇ 20 -- ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾ ರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ. 60 ದಿನಗಳು ಕಳೆದರೂ ಡಿ ಆರ್ ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಮಂಜೂರಾಗಿದ್ದರೂ ರನ್ಯಾ ರಾವ್ ಮತ್ತು ಆಕೆಯ ಇಬ್ಬರು ಸಹಚರರಾದ ತರುಣ್ ಕೊಡೂರು ರಾಜು ಹಾಗೂ ಸಾಹಿಲ್ ಸಕರಿಯಾ ಜೈನ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974 (COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧಿಸಿರುವುದರಿಂದ ಜೈಲಿನಿಂದ ಬಿಡುಗಡೆ ಮಾಡಲಾಗದು ಎಂದು ಕಾನೂನು ಹೇಳುತ್ತದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.