ಭಾರತ, ಮಾರ್ಚ್ 2 -- ತಮ್ಮ ಐತಿಹಾಸಿಕ 300ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಅವರು ಕೇವಲ 11 ರನ್ ಗಳಿಸಿ ನಿರಾಸೆ ಮೂಡಿಸಿದರು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಮತ್ತು ಇದು ಅವರ 300ನೇ ಏಕದಿನ ಪಂದ್ಯವಾದ ಕಾರಣ ವಿರಾಟ್ ಕೊಹ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದರು. ಆದರೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದ ಕೊಹ್ಲಿ, ಎದುರಿಸಿದ 14 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ಏಳನೇ ಓವರ್​​​ನಲ್ಲಿ ಮ್ಯಾಟ್ ಹೆನ್ರಿ ಬೌಲಿಂಗ್​ನಲ್ಲಿ ಗ್ಲೆನ್ ಫಿಲಿಪ್ಸ್ ಅವರಿಗೆ ಕೊಹ್ಲಿ ಕ್ಯಾಚ್ ನೀಡಿ ಹೊರನಡೆದರು. ಈ ಕ್ಯಾಚ್ ಹಿಡಿದ ಬೆನ್ನಲ್ಲೇ ಕೊಹ್ಲಿ ಕ್ರೀಸ್​ನಲ್ಲೇ ಒಂದು ಕ್ಷಣ ನಿಬ್ಬೆರಗಾಗಿ ನಿಂತುಬಿಟ್ಟರು. ನಿಜವಾಗಲೂ ಈ ಸ್ಟನ್ನಿಂಗ್ ಕ್ಯಾಚ್​ ಕೊಹ್ಲಿ ಮಾತ್ರವಲ್ಲ, ಸ್ಟೇಡಿಯಂನಲ್ಲಿದ್ದ ಎಲ್ಲರನ್...