ಭಾರತ, ಜನವರಿ 31 -- ಬೆಂಗಳೂರು: ಚೆಕ್​ ಬೌನ್ಸ್​ ಪ್ರಕರಣಕ್ಕೆ ಸಂಬಂಧಿಸಿ ಆರ್​ಟಿಐ ಕಾರ್ಯಕರ್ತ ಹಾಗೂ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ 6 ತಿಂಗಳ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾ‌ರ್ ಎನ್ನುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿಯನ್ನು ಜನವರಿ 30ರಂದು ವಿಚಾರಣೆ ನಡೆಸಿದ್ದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಆದರೆ ಶಿಕ್ಷೆಯ ಪ್ರಮಾಣ ಪ್ರಕಟಿಸಿರಲಿಲ್ಲ. ಇಂದು ಈ ಪ್ರಕರಣದ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಸ್ನೇಹಮಯಿ ಕೃಷ್ಣಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಕುಮಾರ್ ಅವರಿಂದ ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1 ಲಕ್ಷ 75 ಸಾವಿರ ರೂಪಾಯಿ ಸಾಲ ಪಡೆದಿದ್ದ ಆರೋಪ ಇದಾಗಿದೆ. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆದ ಹಿನ್ನೆಲೆ ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ 6 ತಿಂಗಳ ಕಾಲ ಶಿಕ್ಷೆ ವಿಧಿಸಿದೆ.

ಈ ಬಗ್ಗೆ ಪ್ರತಿಕ್ರಿಯಿ...