ಭಾರತ, ಜೂನ್ 4 -- ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ವಿರಾಟ್ ಕೊಹ್ಲಿ ಅವರ ಪ್ರಾಮಾಣಿಕೆಯನ್ನೂ ಹೊಗಳಿದ್ದಾರೆ. 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್‌ ಆಗಿರುವ ಆರ್‌ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ‌ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರ‌ಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ‌ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ‌. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ‌ ಎಂದರ...