ಭಾರತ, ಫೆಬ್ರವರಿ 9 -- ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 31ಮಂದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಇದೇ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಫೆ.9) ತಿಳಿಸಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಇತ್ತೀಚೆಗಷ್ಟೇ 8 ನಕ್ಸಲರು ಹತ್ಯೆಗೀಡಾಗಿದ್ದರು. ಅದಾದ ಒಂದು ವಾರದೊಳಗೆ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಒಂದು ವರ್ಷದೊಳಗೆ ದೇಶದಲ್ಲಿ ನಕ್ಸಲರನ್ನು ನಿರ್ನಾಮ ಮಾಡುತ್ತೇವೆ ಎಂದು ಗೃಹ ಸಚಿವ ಅಮಿತ್‌ ಶಾ ಕೆಲವೇ ದಿನಗಳ ಹಿಂದೆ ಪ್ರತಿಜ್ಞೆ ಮಾಡಿದ್ದರು. ಅದರ ಬೆನ್ನಲ್ಲೇ ಈ ಎನ್‌ಕೌಂಟರ್‌ ನಡೆದಿದೆ.

ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಶುಕ್ರವಾರ (ಫೆ.7) ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ ಮತ್ತು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಕಾರ್ಯಾಚರಣ...