ಭಾರತ, ಮೇ 1 -- ಸಿಎಂ ಸಿದ್ದರಾಮಯ್ಯ ಆಗ್ರಹ: ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀಸಲಾತಿಯಲ್ಲಿ ಶೇಕಡ 50 ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಅದೂ ಅಲ್ಲದೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 1) ತಮ್ಮ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.