ಭಾರತ, ಫೆಬ್ರವರಿ 10 -- ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ ಬೆನ್ನಲ್ಲೇ ಜನಸಾಮಾನ್ಯರಿಂದ ತೀವ್ರ ಆಕ್ರೋಶ ಎದುರಿಸುತ್ತಿದೆ. ಫೆ 9ರ ಭಾನುವಾರದಿಂದಲೇ ಹೊಸ ದರಗಳು ಜಾರಿಗೆ ಬಂದಿದ್ದು, ದುಬಾರಿ ಬೆಲೆ ತೆತ್ತು ಮೆಟ್ರೋದಲ್ಲಿ ಪ್ರಯಾಣಿಸಬೇಕಾದ ಸನ್ನಿವೇಶ ಬಂದಿರುವುದಕ್ಕೆ ಪ್ರಯಾಣಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಹೊಸ ದರದ ಅನ್ವಯ ಪ್ರತಿ ಬಾರಿ ಪ್ರಯಾಣಿಸುವಾಗಲೂ ಸರಾಸರಿ 10 ರಿಂದ 90 ರೂಪಾಯಿಯವರೆಗೆ ಟಿಕೆಟ್ ದರ ತೆರಬೇಕಾಗುತ್ತದೆ. ಇದು ನಿತ್ಯ ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಕೋಪಕ್ಕೆ ಕಾರಣವಾಗಿದೆ. ಟಿಕೆಟ್‌ ದರ ಏರಿಸಿದ ಬೆನ್ನಲ್ಲೇ ನಾಗರಿಕರು ಪ್ರತಿಕ್ರಿಯೆ ನೀಡುತ್ತಿದ್ದು, ಸೋಷಿಯಲ್‌ ಮೀಡಿಯಾದಲ್ಲೂ ಅಸಮಾಧಾನ ಹೊರಹಾಕುತ್ತಿದ್ದಾರೆ.

ದರ ಏರಿಕೆ ಮಾಡಿದ ಹೊಣೆ ಹೊರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನುಣುಚಿಕೊಳ್ಳುತ್ತಿವೆ. ಇದು ಜನರು ಮತ್ತಷ್ಟು ಆಕ್ರೋಶಗೊಳ್ಳುವಂತೆ ಮಾಡಿದೆ. ಜನಸಾಮಾನ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಅಸಮಾಧಾನ ಹೊರಹಾಕ...