Bengaluru, ಏಪ್ರಿಲ್ 27 -- ಬೆಂಗಳೂರು: ರಾಜ್ಯದ ಕೆಲವೆಡೆ ಸಿಇಟಿ ಪರೀಕ್ಷೆಗಳು ನಡೆಯುತ್ತಿದ್ದ ಸಂದರ್ಭ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಯಲು ಹೇಳಿದ ಹಾಗೂ ಅದನ್ನು ತುಂಡುಮಾಡಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವೆಡೆ ಬ್ರಾಹ್ಮಣ ಮತ್ತು ಬೆಂಬಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಈ ಪ್ರಕರಣ, ಹೈಕೋರ್ಟ್ ಮೆಟ್ಟಲೇರಿತ್ತು. ಇದೀಗ ರಾಜ್ಯ ಸರಕಾರಕ್ಕೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಒಳಗೊಂಡ ದ್ವಿಸದಸ್ಯ ವಿಭಾಗೀಯ ಪೀಠ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ನೋಟಿಸ್ ನೀಡಿದೆ.

ಪದಾಂಕಿತ ಹಿರಿಯ ನ್ಯಾಯವಾದಿ ಶ್ರೀರಂಗ ಎಸ್ ನೇತೃತ್ವದಲ್ಲಿ ನ್ಯಾಯವಾದಿಗಳಾದ ಸುಮನಾ ನಾಗಾನಂದ್ ಮತ್ತು ಅಶ್ವಿನಿ ಎನ್. ರವೀಂದ್ರ ಒಳಗೊಂಡ ತಂಡ ಶಿವಮೊಗ್ಗ, ಬೀದರ್, ಧಾರವಾಡಗಳಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ವಿಚಾರದ ಕುರಿತು ಮಹ...