ಭಾರತ, ಏಪ್ರಿಲ್ 22 -- ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದೆ. ಇದು ಪುಲ್ವಾಮಾ ದಾಳಿ ಬಳಿಕದ ಭೀಕರ ಉಗ್ರರ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗರು ಮೃತಪಟ್ಟಿದ್ದಾರೆ. ಇಬ್ಬರು ವಿದೇಶಿಯರು ಕೂಡ ಉಗ್ರರ ದಾಳಿಯಿಂದ ಮೃತಪಟ್ಟಿದ್ದಾರೆ. ಕರ್ನಾಟಕದ ಶಿವಮೊಗ್ಗದ ಉದ್ಯಮಿ ಮಂಜುನಾಥ್‌ ಕೂಡ ಉಗ್ರರ ದಳಯಿಂದ ಮೃತಪಟ್ಟಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸದ್ಯ ದೊರಕಿರುವ ಮಾಹಿತಿಯನ್ವಯ 26 ಜನರು ಮೃತಪಟ್ಟಿದ್ದಾರೆ. ಈ ಸಂಖ್ಯೆ ಏರಿಕೆ ಕಾಣುವ ಆತಂಕವೂ ಇದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದು, ದಾಳಿ ಸ್ಥಳಕ್ಕೆ ಭೇಟಿ ನೀಡಿ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದ...