Bengaluru, ಏಪ್ರಿಲ್ 7 -- ವಿರಾಟ್ ಕೊಹ್ಲಿ ಆರ್ಭಟಕ್ಕೆ ಬ್ರೇಕ್‌ ಇಲ್ಲ. ಟೆಸ್ಟ್‌ ಇರಲಿ, ಏಕದಿನ ಇರಲಿ ಅಥವಾ ಟಿ20ಯೇ ಆಗಲಿ. ಕಿಂಗ್‌ ಕೊಹ್ಲಿ ಕ್ರಿಕೆಟ್ ಜಗತ್ತನ್ನು ಆಳುತ್ತಲೇ ಇದ್ದಾರೆ. ಭಾರತ ಕಂಡ ಅತ್ಯಂತ ಶ್ರೇಷ್ಠ ಕ್ರಿಕೆಟಿಗ ಪಂದ್ಯದಿಂದ ಪಂದ್ಯಕ್ಕೆ ದಾಖಲೆಗಳನ್ನು ಮಾಡುತ್ತಲೇ ಇದ್ದಾರೆ. ಏಪ್ರಿಲ್‌ 6ರ ಸೋಮವಾರ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಅವರು ಬೃಹತ್ ಮೈಲಿಗಲ್ಲು ಸಾಧಿಸಿದ್ದಾರೆ. ಮುಂಬೈ ಇಂಡಿಯನ್ಸ್‌ ವಿರುದ್ಧ ಆರ್‌ಸಿಬಿ ತಂಡದ ಪಂದ್ಯದ ಸಮಯದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಚುಟುಕು ಸ್ವರೂಪದ ಕ್ರಿಕೆಟ್‌ನಲ್ಲಿ 13000 ರನ್‌ಗಳ ಮೈಲಿಗಲ್ಲು ತಲುಪಿದ ಭಾರತದ ಮೊದಲ ಮತ್ತು ಕ್ರಿಕೆಟ್ ಇತಿಹಾಸದಲ್ಲಿ ಒಟ್ಟಾರೆ ಐದನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಮುಂಬೈ ಇಂಡಿಯನ್ಸ್‌ ಮತ್ತು ಆರ್‌ಸಿಬಿ ನಡುವಿನ ಪಂದ್ಯ ಹಲವು ಕಾರಣಗಳಿಂದ ವಿಶೇಷ ಎನಿಸಿತು. ಪಂದ್ಯದ ಮೂಲಕ ಮುಂಬೈ ತಂಡಕ್ಕೆ ಪ್ರಸಕ್ತ ಆವೃತ್ತಿಯಲ್ಲಿ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಪದಾರ್ಪಣೆ ಮಾ...