Bangalore, ಮೇ 1 -- ಕರ್ನಾಟಕದಲ್ಲಿ ಜಾತಿ ಗಣತಿಯ ವಿವಾದ ಇನ್ನೂ ಮುಂದುವರಿದಿರುವ ನಡುವೆಯೇ ಕೇಂದ್ರ ಸರ್ಕಾರವೂ ಕರ್ನಾಟಕದ ಹಾದಿಯನ್ನೇ ಹಿಡಿದಿದೆ.ಕೇಂದ್ರ ಸರ್ಕಾರವೂ ಜನಗಣತಿಯ ಜತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವುದಾಗಿ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಈ ಕುರಿತು ತೀರ್ಮಾನವನ್ನು ಪ್ರಕಟಿಸಿದೆ. ಗಣತಿ ಹೇಗಿರಲಿದೆ ಎನ್ನುವ ಕುರಿತು ಇನ್ನಷ್ಟೇ ತಿಳಿಯಬೇಕಿದೆ. ಆದರೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಜನ ಹಾಗೂ ಜಾತಿ ಗಣತಿಯನ್ನು ಕರ್ನಾಟಕದ ಮುಖ್ಯಮಂತ್ರಿ ಹಾಗೂ ಕಳೆದ ಎರಡು ದಶಕದಿಂದಲೂ ಈ ನಿಟ್ಟಿನಲ್ಲಿ ಗಟ್ಟಿ ನಿಲುವು ತೋರಿತ್ತಿರುವ ಹಿರಿಯ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಆಗಲಿ ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದ...