ಭಾರತ, ಮೇ 5 -- ಜಾತಿ ಮೀಸಲಾತಿ ಸಮೀಕ್ಷೆ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದ ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹ ಕಾರ್ಯ ಇಂದು (ಮೇ 5) ಶುರುವಾಗುತ್ತಿದೆ. ಇದರಲ್ಲಿ ಜಾತಿ ತಾರತಮ್ಯದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅದರ ಆಧಾರದ ಮೇಲೆ ಒಳಮೀಸಲು ಸೌಲಭ್ಯ ಕಲ್ಪಿಸುವ ಚಿಂತನೆ ಸರ್ಕಾರದ್ದು. ನಿವೃತ್ತ ನ್ಯಾಯಮೂರ್ತಿ ಹೆಚ್‌ ಎನ್‌ ನಾಗಮೋಹನದಾಸ್‌ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ರೂಪುರೇಖೆಗಳನ್ನು ಸಿದ್ಧಪಡಿಸಿದೆ. ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ 2025 ನಡೆಯಲಿದ್ದು, ಮೊದಲ ಹಂತ ಇಂದಿನಿಂದ (ಮೇ 5) 17ರ ತನಕ ನಡೆಯಲಿದೆ.

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ಶಿಫಾರಸು ಪ್ರಕಾರ, ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ 2025 ಅನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊಬೈಲ್ ಆ್ಯಪ್‌ ಬಳಸಿ ಸಮೀಕ್ಷೆ ನಡೆಸಲಾಗುತ್ತಿದೆ. 3 ಹ...