Kalaburgi, ಏಪ್ರಿಲ್ 16 -- ಕಲಬುರಗಿ: ಕರ್ನಾಟಕ ಜಾತಿ ಸಾಮಾಜಿಕ ಸಮೀಕ್ಷೆಯಲ್ಲಿ ಯಾವುದೇ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗುವುದಿಲ್ಲ. ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಮಾಜಿಕ ಗಣತಿ ವಿಚಾರದಲ್ಲಿ ಅಭಿಪ್ರಾಯಗಳು ಬರುತ್ತಿವೆ. ರಾಜಕೀಯ ಪಕ್ಷಗಳ ಜತೆಗೆ ನಾನಾ ಸಂಘಟನೆಗಳೂ ಅಭಿಪ್ರಾಯ ವ್ಯಕ್ತಪಡಿಸಿವೆ. ಎಲ್ಲವನ್ನೂ ಗಮನಿಸಿದ್ದೇನೆ...