ಭಾರತ, ಮೇ 24 -- ಪ್ಲೇಆಫ್ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್ ಮತ್ತು ಎಲಿಮಿನೇಟ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಕೊನೆಯ ಲೀಗ್ ಪಂದ್ಯಕ್ಕೆ ಸಜ್ಜಾಗಿವೆ. ಟೇಬಲ್ ಟಾಪರ್ ಮತ್ತು ಟೇಬಲ್ ಕೊನೆಯ ಸ್ಥಾನ ಪಡೆದ ತಂಡಗಳ ನಡುವೆ ಪೈಪೋಟಿ ನಡೆಯಲಿದೆ. ಗುಜರಾತ್ ಈ ಪಂದ್ಯವನ್ನು ಗೆದ್ದು ಅಗ್ರ-2ರಲ್ಲಿ ಮುಗಿಸುವ ತವಕದಲ್ಲಿದ್ದರೆ, ಚೆನ್ನೈ ಗೆದ್ದು ಲೀಗ್ ಮುಗಿಸುವ ಲೆಕ್ಕಾಚಾರ ಹಾಕಿಕೊಂಡಿದೆ. ಈ ಪಂದ್ಯಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ. ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.
ತಮ್ಮ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿರುವ ಜಿಟಿ ತಂಡವು ಇಂದು (ಭಾನುವಾರ 25) ಸೋಲಿನಿಂದ ಹೊರಬರುವುದರ ಜೊತೆಗೆ ಟಾಪ್-2ರಲ್ಲಿ ಮುಗಿಸುವ ಯೋಜನೆ ಹಾಕಿಕೊಂಡಿದೆ. ಆದರೆ ನಾಕೌಟ್ಗೂ ಮುನ್ನ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ನೀಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಆದರೆ ರಶೀದ್ ಖಾನ್ ನಿರೀಕ್ಷೆಗೆ ತಕ್ಕಂತೆ ಆಡದೇ ಇರುವುದು ತಲೆನೋವು ಹೆಚ್ಚಳಕ್ಕೆ ಕಾರಣವಾಗಿದೆ....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.