ಭಾರತ, ಜೂನ್ 19 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 20 ರ ಶುಕ್ರವಾರದಿಂದ 26ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮನೆ ಮಂದಿಯ ಸಂತೋಷದಿಂದ ಬಾಳುವಿರಿ. ಮಕ್ಕಳ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪರಪ್ರದೇಶಕ್ಕೆ ತೆರಳುವಿರಿ. ಬೇಡದ ವಿಚಾರಗಳಿಗೆ ಯೋಚನೆ ಮಾಡುವಿರಿ. ಕೆಲಸ ಕಾರ್ಯಗಳ ಆಳವನ್ನು ತಿಳಿಯದೆ ಕಷ್ಟಕ್ಕೆ ಸಿಲುಕುವಿರಿ. ದುಡುಕಿನ ನಿರ್ಧಾರದಿಂದ ಕುಟುಂಬದವರ ವಿರೋಧಕ್ಕೆ ಗುರಿಯಾಗುವಿರಿ. ಆತುರದ ಮನಸ್ಥಿತಿಯ ಕಾರಣ ಕೆಲಸ ಕಾರ್ಯಗಳು ಅಪೂರ್ಣವಾಗುತ್ತವೆ. ಉ...