ಭಾರತ, ಏಪ್ರಿಲ್ 21 -- ಕರ್ನಾಟಕದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣ ಈಗ ರಾಜ್ಯದಾದ್ಯಂತ ಸಂಚಲನ ಮೂಡಿಸಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದ ಓಂ ಪ್ರಕಾಶ್ ಭಾನುವಾರ (ಏಪ್ರಿಲ್ 20) ಭೀಕರವಾಗಿ ಕೊಲೆಯಾಗಿದ್ದರು. ಈ ಕೊಲೆಗೆ ಸಂಬಂಧಿಸಿ ಓಂ ಪ್ರಕಾಶ್‌ ಪತ್ನಿ ಹಾಗೂ ಮಗಳ ಮೇಲೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಅವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದಾರೆ.

ಸದ್ಯ ಓಂ ಪ್ರಕಾಶ್‌ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದು, ಇಂದು (ಸೋಮವಾರ 21) ಓಂಪ್ರಕಾಶ್ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಘಟನೆ ಸಂಬಂಧ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿರುವ ಪಲ್ಲವಿ ಕೊಲೆಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಕೌಟುಂಬಿಕ ಕಲಹದ ಕಾರಣದಿಂದ ಇವರ ಕೊಲೆ ನಡೆದಿದೆ ಎಂದು ಮೊದಲೇ ಊಹಿಸಲಾಗಿತ್ತು. ಅದರಂತೆ ಪಲ್ಲವಿ ಹಾಗೂ ಮಗಳನ್ನು ವಶಕ್ಕೆ ಪಡೆಯಲಾಗಿತ್ತು.

ತನಿಖೆಯ ವೇಳೆ ನಮ್ಮ ಜೀವ ಉಳಿಸಿಕೊಳ್ಳಲು ನಾವು ಕೊಲೆ ಮಾಡಿದ್ದಾಗಿ ಹೇಳಿಕೆ...