ಭಾರತ, ಜೂನ್ 18 -- ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ನೆರವಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜುಲೈ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಜುಲೈ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಕ್ರೀಡಾ ಮನೋಭಾವನೆಯ ಕಾರಣ ಮನದಲ್ಲಿ ನೆಮ್ಮದಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಜೀವನದಲ್ಲಿ ನಿಮಗೆ ಯಾವುದೂ ಅಸಾಧ್ಯವಾಗದು. ವಿದ್ಯಾರ್ಥಿಗಳು ಏಕಾಂಗಿಯಾಗಿ ಸಾಧಿನೆಯತ್ತ ಸಾಗುವರು. ಕಡಿಮೆ ಅವಕಾ...