Bengaluru, ಜೂನ್ 18 -- ಎಷ್ಟೋ ಜನರು ನಿತ್ಯದ ದಿನಚರಿ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಮಾಡಿಕೊಂಡಿರುತ್ತಾರೆ. ಅಂಥವರಿಗೆ ನೆರವಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಜುಲೈ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ ಜುಲೈ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಮನಸ್ಸು ಒಳ್ಳೆಯದಾದರೂ ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರುವುದಿಲ್ಲ. ಆರಂಭದ ದಿನಗಳಲ್ಲಿ ಕುಟುಂಬದ ನೆಮ್ಮದಿ ಮತ್ತು ಐಕ್ಯಮತ್ಯದ ...