ಭಾರತ, ಜೂನ್ 13 -- ತುಮಕೂರು: ಕಳೆದ ಮಾರ್ಚ್ ಮಾಹೆಯಲ್ಲಿ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 101909 ಪ್ರಕರಣಗಳ ಪೈಕಿ 11780 ಪ್ರಕರಣ ಹಾಗೂ 63852 ವ್ಯಾಜ್ಯ ಪೂರ್ವ ಪ್ರಕರಣ ಸೇರಿದಂತೆ ಒಟ್ಟು 75632 ಪ್ರಕರಣ ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಹೇಳಿದರು.

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿ, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆ ಒದಗಿಸುವ ಸಲುವಾಗಿ ಜುಲೈ 12 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ (ಲೋಕ ಅದಾಲತ್) ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ ಆದಾಲತ...