Bengaluru, ಮೇ 28 -- ಯುವ ಸಿನಿಮಾ ಬಳಿಕ ದೊಡ್ಮನೆ ಕುಡಿ ಯುವರಾಜ್‌ ಕುಮಾರ್‌ ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಎಕ್ಕ. ಟೀಸರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಚಿತ್ರವೀಗ ತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಜುಲೈ 18ಕ್ಕೆ ಎಕ್ಕ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.

ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ಚಿತ್ರ ನಿರ್ಮಾಣ ಮಾಡುತ್ತಿರುವ ಎಕ್ಕ ಸಿನಿಮಾಗೆ ರೋಹಿತ್‌ ಪದಕಿ ಆಕ್ಷನ್‌ ಕಟ್‌ ಹೇಳಿದ್ದಾರೆ. ನಾಯಕ ಯುವರಾಜ್‌ ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿದೆ. 'ರತ್ನನ್ ಪ್ರಪಂಚ' ಬಳಿಕ 'ಉತ್ತರಕಾಂಡ' ಸಿನಿಮಾ ಆರಂಭಿಸಿದ್ದ ರೋಹಿತ್ ಪದಕಿ ಅದನ್ನು ಪಕ್ಕಕ್ಕಿಟ್ಟು 'ಎಕ್ಕ' ಚಿತ್ರ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ಕಲರ್ಸ್ ಕನ್ನಡದಲ್ಲಿ ಬರ್ತಿದೆ ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್...