ಭಾರತ, ಜುಲೈ 19 -- ಮೈಸೂರು: ಜೆಡಿಎಸ್-ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು. ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರ...