ಭಾರತ, ಮಾರ್ಚ್ 13 -- 2024ರ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್​ನಲ್ಲಿ ಮುಗ್ಗರಿಸಿ ನಿರಾಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ 2025ರ ಆವೃತ್ತಿಯಲ್ಲಿ ಚೊಚ್ಚಲ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಮಾರ್ಚ್​ 22ರಿಂದ ಶುರುವಾಗುವ 18ನೇ ಆವೃತ್ತಿಯ ಐಪಿಎಲ್​ಗೆ ಸಿದ್ಧತೆ ಆರಂಭಿಸಿರುವ ಆರ್​ಸಿಬಿ, ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ನೂತನ ನಾಯಕ ರಜತ್ ಪಾಟೀದಾರ್ ನೇತೃತ್ವದಲ್ಲಿ ನೂತನ ಆಟಗಾರರೊಂದಿಗೆ ನೂತನ ಸೀಸನ್ ಆರಂಭಿಸುವ ಲೆಕ್ಕಾಚಾರ ಹೊಂದಿದೆ.

ರೆಡ್ ಆರ್ಮಿ, ತನ್ನ ಮೊದಲ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ 11 ಕಣಕ್ಕಿಳಿಸಲು ಸಜ್ಜಾಗಿದೆ. ಬೌಲಿಂಗ್ ವಿಭಾಗ ಹಿಂದೆಂದಿಗಿಂತಲೂ ಬಲಿಷ್ಠವಾಗಿರುವುದು ತಂಡದ ಬಲ ಹೆಚ್ಚಿಸಿದ್ದರೂ ಸ್ಪೆಷಲಿಸ್ಟ್​ ಸ್ಪಿನ್ನರ್​ಗಳೇ ಇಲ್ಲದಿರುವುದು ಕಾಡುವಂತೆ ಮಾಡಿದೆ. ಸಮತೋಲಿತ ತಂಡ ಕಟ್ಟಿರುವ ಬೆಂಗಳೂರು, ಆಡುವ 11ರ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ ನೀಡಬೇಕು ಎನ್ನುವುದರ ಸವಾಲಿಗೆ ಸಿಲುಕಿದೆ. ಟೀಮ್ ಮ್ಯಾನೇಜ್​ಮೆಂಟ್ ಯಾವ ರ...