ಭಾರತ, ಮಾರ್ಚ್ 25 -- TTD Salary Hike: ತಿರುಪತಿ ತಿರುಮಲ ದೇವಸ್ಥಾನ (ಟಟಿಡಿ) ದ ಆಡಳಿತ ಮಂಡಳಿಯು ಉದ್ಯೋಗಿಗಳ ವಿಚಾರದಲ್ಲಿ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಟಿಟಿಡಿ ಆಡಳಿತ ಮಂಡಳಿಯ ನಿರ್ಧಾರಗಳು ಅಲ್ಲಿನ ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡುವಂತಿದೆ. ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಖಾಯಂ ಉದ್ಯೋಗಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸುಪಥ ದರ್ಶನ ನೀಡಲಾಗುವುದು ಎಂದು ಹೇಳಿದ್ದಾರೆ. ಅವರಿಗೆ ಟಿಕೆಟ್ ನೀಡಿ ಶ್ರೀವಾರಿ ದರ್ಶನ ಒದಗಿಸುವುದಾಗಿ ಕೂಡ ಹೇಳಿದ್ದಾರೆ. ಟಿಟಿಡಿಯಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರ ನೌಕರರನ್ನು ವಜಾಗೊಳಿಸುವ ಬಗೆಗಿನ ನಿರ್ಣಯವನ್ನು ಕೂಡ ಆಡಳಿತ ಮಂಡಳಿಯ ಸಭೆಯಲ್ಲಿ ಅಂಗೀಕರಿಸಲಾಯಿತು. ಇದಲ್ಲದೆ, ತಾತ್ಕಾಲಿಕ ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಬಗ್ಗೆಯೂ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಯಿತು. ಆಡಳಿತ ಮಂಡಳಿ ಸಭೆಯಲ್ಲಿ ಒಂದು ನಿರ್ಣಯ ಅಂಗೀಕರಿಸಲಾಯಿತು.

2025-26ನೇ ಹಣಕಾಸು ವರ್ಷದಲ್ಲಿ 5,258.68 ಕೋಟಿ ರೂ ಮೊತ್ತವನ್ನು...