ಭಾರತ, ಮೇ 7 -- ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿವೃತ್ತಿ ಘೋಷಿಸಿದ್ದಾರೆ. ಜೂನ್ 20ರಿಂದ ಶುರುವಾಗುವ ಇಂಗ್ಲೆಂಡ್ ಸರಣಿಗೂ ಮುನ್ನವೇ ಟೆಸ್ಟ್ ಕ್ರಿಕೆಟ್ನಿಂದ ಹಿಂದೆ ಸರಿಯುವುದಾಗಿ ಇನ್ಸ್ಟಾಗ್ರಾಂ ಸ್ಟೋರಿಯ ಮೂಲಕ ಪ್ರಕಟಿಸಿದ್ದಾರೆ. ಆದರೆ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ. ಹಿಟ್ಮ್ಯಾನ್ ಆಡಿರುವ 67 ಟೆಸ್ಟ್ ಪಂದ್ಯಗಳಲ್ಲಿ 12 ಶತಕ ಮತ್ತು 18 ಅರ್ಧಶತಕಗಳೊಂದಿಗೆ 40.57 ಸರಾಸರಿಯಲ್ಲಿ 4301 ರನ್ ಗಳಿಸಿದ್ದಾರೆ.
'ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ನಿಮಗೆ ತಿಳಿಸಲು ಬಯಸುತ್ತೇನೆ. ಭಾರತವನ್ನು ದೀರ್ಘ ಕಾಲದ ಸ್ವರೂಪದಲ್ಲಿ ಪ್ರತಿನಿಧಿಸುವುದು ನನ್ನ ಜೀವನದ ಶ್ರೇಷ್ಠ ಗೌರವಗಳಲ್ಲಿ ಒಂದಾಗಿದೆ. ಈ ಪ್ರಯಾಣದುದ್ದಕ್ಕೂ ಅಪಾರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ನೀಲಿ ಬಣ್ಣವನ್ನು ಧರಿಸುವುದನ್ನು ಮುಂದುವರಿಸುತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.