ಭಾರತ, ಮೇ 12 -- ವಿರಾಟ್ ಕೊಹ್ಲಿ ಬ್ಯಾಟ್ಸ್ಮನ್ ಆಗಿ ಮಾತ್ರವಲ್ಲದೆ ನಾಯಕನಾಗಿಯೂ ಉತ್ತಮ ದಾಖಲೆ ಹೊಂದಿದ್ದಾರೆ. ಭಾರತದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ. 2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿರುವ ವಿರಾಟ್, 40 ಪಂದ್ಯಗಳನ್ನು ಗೆದ್ದಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 17 ಟೆಸ್ಟ್ ಪಂದ್ಯಗಳನ್ನು ಸೋತಿದೆ, 11 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ 2008 ರಿಂದ 2014 ರವರೆಗೆ 60 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 27 ಪಂದ್ಯ ಗೆದ್ದಿದೆ. ಅವರ ನಾಯಕತ್ವದಲ್ಲಿ ಭಾರತ 18 ಟೆಸ್ಟ್ ಪಂದ್ಯಗಳನ್ನು ಸೋತಿದೆ, 15 ಪಂದ್ಯ ಡ್ರಾ ಮಾಡಿಕೊಂಡಿದೆ.
ಸೌರವ್ ಗಂಗೂಲಿ 49 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಅವರು 2000 ರಿಂದ 2005 ರವರೆಗೆ 21 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.