Bangalore, ಮೇ 15 -- ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಟೆಸ್ಟ್ ಕ್ರಿಕೆಟ್​​​ನಲ್ಲಿ ನಾಯಕನಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು 109 ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿದ್ದು, 25 ಸೆಂಚುರಿ ಸಿಡಿಸಿದ್ದಾರೆ. ಈ ವೇಳೆ ಅವರ ಸರಾಸರಿ 47.84 ಆಗಿತ್ತು.

ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 68 ಪಂದ್ಯಗಳನ್ನು ಮುನ್ನಡೆಸಿದ್ದು, 20 ಶತಕ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 54.80 ಆಗಿತ್ತು. ಕೊಹ್ಲಿ ಪ್ರತಿ ಮೂರು ಅಥವಾ ನಾಲ್ಕು ಪಂದ್ಯಗಳಿಗೊಂದು ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 77 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, 19 ಶತಕ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಇವರು ಮೂರನೇ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 57 ಟೆಸ್ಟ್ ಪಂದ್ಯಗಳನ...