Bengaluru, ಮೇ 22 -- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ-ಕೆಎಸ್ಇಎಬಿಯಿಂದ ಎಸ್ಎಸ್ಎಲ್ಸಿ ಫಲಿತಾಂಶ ಬಂದಾಗಿದೆ. ಬರೋಬ್ಬರಿ 20 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. 625 ಅಂಕಗಳನ್ನು ಪಡೆಯಲು ಹೇಗೆ ಸಾಧ್ಯವಾಯ್ತು ಅನ್ನೋದು ಅನೇಕರು ಕುತೂಹಲದಿಂದ ಕೇಳುವ ಪ್ರಶ್ನೆ. ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳ ಪೈಕಿ ಬೆಂಗಳೂರಿನ ಯುಕ್ತಾ ಎಸ್ ಕೂಡ ಒಬ್ಬರು. ಈ ಸಾಧನೆ ಮಾಡಲು ಹೇಗೆ ಸಾಧ್ಯವಾಯಿತು ಎನ್ನುವ ಕುರಿತು ವಿದ್ಯಾರ್ಥಿನಿ ಯುಕ್ತಾ, 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ (ಎಚ್ಟಿ ಕನ್ನಡ) ಪ್ರತಿನಿಧಿನ ರಾಘವೇಂದ್ರ ಎಂ.ವೈ. ಅವರೊಂದಿಗೆ ಮಾತನಾಡಿದ್ದಾರೆ.
ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಬೇಕೆಂಬ ಉದ್ದೇಶದಿಂದ ಎಲ್ಲಾ ವಿಷಯಗಳಿಗೂ ಬೇರೆ ಬೇರೆ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆ. ಗಣಿತ, ವಿಜ್ಞಾನ ಮತ್ತು ಸಮಾಜ ವಿಷಯಗಳನ್ನು ನಿತ್ಯ ಓದುತ್ತಿದ್ದೆ. ನನಗೆ ಸಮಾಜ ತುಂಬ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.