ಭಾರತ, ಮಾರ್ಚ್ 13 -- ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಜೂನ್​ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್​ಗೆ (WTC Final) ಅರ್ಹತೆ ಪಡೆಯಲು ಭಾರತ ತಂಡ ವಿಫಲವಾಗಿದೆ. ಭಾರತ ಕ್ವಾಲಿಫೈ ಆಗದ ಕಾರಣ ಈ 5 ದಿನಗಳ ಪಂದ್ಯದ ಆಯೋಜಕರಿಗೆ 4 ಮಿಲಿಯನ್ ಪೌಂಡ್ (ಸುಮಾರು 45 ಕೋಟಿ ರೂಪಾಯಿಗೂ ಹೆಚ್ಚು) ನಷ್ಟವಾಗುವ ಸಾಧ್ಯತೆ ಇದೆ. ವಿಶ್ವ ಕ್ರಿಕೆಟ್​ನಲ್ಲಿ ಭಾರತದ ತಾಕತ್ತು ಎಷ್ಟಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಕಳೆದ 2 ಆವೃತ್ತಿಗಳಲ್ಲೂ ಫೈನಲ್ ಪ್ರವೇಶಿಸಿದ್ದ ಭಾರತ, ಕ್ರಮವಾಗಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಸೋತು ರನ್ನರ್​ಅಪ್ ಆಗಿತ್ತು. ಆದರೆ 3ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಹೀನಾಯ ಸೋಲುಂಡ ಕಾರಣ ಸತತ 3ನೇ ಸಲ ಪ್ರಶಸ್ತಿ ಸುತ್ತಿಗೆ ಅರ್ಹತೆ ಗಳಿಸಲು ಸಾಧ್ಯವಾಗಿಲ್ಲ. ಬದಲಿಗೆ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಫೈನಲ್ ನಡೆಯಲಿದೆ.

2023-25ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಆವೃತ್ತಿಯಲ್ಲಿ ಟೀಮ್ ಇಂಡಿಯಾ ...