ಭಾರತ, ಮಾರ್ಚ್ 15 -- Firefly Movie Release Date: ನಟ ಶಿವರಾಜ್‌ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಸಿನಿಮಾ ʻಫೈರ್ ಫ್ಲೈʼ. ಈಗಾಗಲೇ ಟೀಸರ್ ಮೂಲಕ ಜನರ ಮನಸನ್ನು ಗೆದ್ದಿರುವ ಈ ಚಿತ್ರ ಇದೀಗ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಅಚ್ಚರಿಯ ವಿಚಾರ ಏನೆಂದರೆ, ಏಪ್ರಿಲ್‌ 24ರ ವರನಟ ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ಈ ಸಿನಿಮಾ ತೆರೆಮೇಲೆ ಬರುತ್ತಿದೆ.

ʻಫೈರ್ ಫ್ಲೈʼ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಅಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದಾರೆ.

ಇದನ್ನೂ ಓದಿ: ಈ ವಾರ ಒಟಿಟಿಯಲ್ಲಿ ಬಿಡುಗಡೆ ಆದ ಟಾಪ್‌ 10 ಸಿನಿಮಾಗಳಿವು; ಕನ್ನಡದ ಎರಡು ಸಿನಿಮಾಗಳೂ ಲಿಸ್ಟ್‌ನಲ್ಲಿವೆ

ಡಾ. ಶಿವರಾಜ್ ಕುಮಾರ್ ಮಾತನಾಡಿ, ...