ಭಾರತ, ಮಾರ್ಚ್ 24 -- ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕ ತಮೀಮ್ ಇಕ್ಬಾಲ್ (Tamim Iqbal), ದಿಢೀರ್ ಹೃದಯಾಘಾತದಿಂದಾಗಿ ಪಂದ್ಯದ ಮಧ್ಯದಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ (ಮಾ.24) ಸಾವರ್‌ ಎಂಬಲ್ಲಿನ ಬಿಕೆಎಸ್‌ಪಿ ಮೈದಾನದಲ್ಲಿ ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯ ನಡೆಯುತ್ತಿದ್ದಾಗ ಘಟನೆ ನಡೆದಿದೆ. ಮಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ಮತ್ತು ಶೈನೆಪುಕುರ್ ಕ್ರಿಕೆಟ್ ಕ್ಲಬ್ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದಾಗಲೇ ತಮೀಮ್‌ಗೆ ತೀವ್ರ ಹೃದಯಾಘಾತವಾಗಿದೆ. ಹೀಗಾಗಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಓವರ್‌ಗಳ ಪಂದ್ಯದ ಮೊದಲ ಇನ್ನಿಂಗ್ಸ್‌ ನಡೆಯುತ್ತಾಗ ತಮೀಮ್ ಫೀಲ್ಡಿಂಗ್ ಮಾಡುತ್ತಿದ್ದರು. ಆಗ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಯಿತು. ಆದರೆ ಸ್ಥಳದಿಂದ ಹೆಲಿಕಾಪ್ಟರ್‌ ಹಾರಲು ಸಾಧ್ಯವಾಗಲಿಲ್ಲ. ಹೀಗಾಗಿ ಬೇರೆ ದಾರಿ ಇಲ್ಲದೆ ಅವರನ್ನು ಸ್ಥಳೀಯ ಫಾಜಿಲತುನ್ನೀಸಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

"ಎ...